Chief Editor
Manohar. R (Manu)
Photo Journalist
chitrataramanu@gmail.com
+91 9845549026
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿನಯದ 124ನೇ ಚಿತ್ರ ಜೂನ್ ನಲ್ಲಿ ಆರಂಭ
Posted date: 24 Sat, Apr 2021 05:54:34 PM
ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ಧುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ ``ಪ್ರೊಡಕ್ಷನ್ ನಂ 1`` ಚಿತ್ರದ  ನಾಯಕರಾಗಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ. ಇದು ಅವರ ಅಭಿನಯದ 124 ನೇ ಚಿತ್ರವೂ ಹೌದು.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಾಮ್ ಧುಲಿಪುಡಿ ನಿರ್ದೇಶಿಸುತ್ತಿದ್ದಾರೆ.
ಜೂನ್ ಮೊದಲವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. 
70 ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಹಾಗೂ ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. 
ಖ್ಯಾತ ನಟರಾದ ನಾಜರ್, ಸಂಪತ್ ಹಾಗೂ ಸಾಧುಕೋಕಿಲ ಸಹ ಈ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. 
ತಮ್ಮ‌ ಕಂಚಿನ ಕಂಠದ ಮೂಲಕ ಜನಮನಸೂರೆಗೊಂಡಿರುವ ಗಾಯಕಿ ಮಂಗ್ಲಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕುಡಿಪುಡಿ ವಿಜಯಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಈ ಚಿತ್ರಕ್ಕೆ ರವಿಕುಮಾರ್ ಸನಾ‌ ಅವರ ಛಾಯಾಗ್ರಹಣವಿದೆ.
 ‌``ಟಗರು`` ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ರವಿ‌ ಸಂತೆಹಕ್ಲು ಕಲಾ ನಿರ್ದೇಶನ ಈ ಹೊಸ ಚಿತ್ರಕ್ಕಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿನಯದ 124ನೇ ಚಿತ್ರ ಜೂನ್ ನಲ್ಲಿ ಆರಂಭ - Chitratara.com
Copyright 2009 chitratara.com Reproduction is forbidden unless authorized. All rights reserved.