ಎಷ್ಟೋ ಜನ ತಾವು ಹುಟ್ಟಿಬೆಳೆದ ಊರನ್ನು ಬೆಳೆದ ಮೇಲೆ ಮರೆಯುವುದುಂಟು. ಆದರೆ ಕೆಲವರು ಮಾತ್ರ ತಮ್ಮೂರಿನ ಜನರ ಕಷ್ಟಕ್ಕೆ ಸ್ಪಂದಿಸುವ ಗುಣವಿರುತ್ತದೆ.
ಕನ್ನಡ ಚಲನಚಿತ್ರರಂಗದಲ್ಲಿ ತಮ್ಮದೇ ಹೆಸರು ಮಾಡಿರುವ ನಿರ್ದೇಶಕ ಆರ್ ಚಂದ್ರು ಲಾಕ್‌ಡೌನ್ ಆರಂಭವಾದಾಗಿನಿಂದಲೂ ಒಂದಲ್ಲ ಒಂದುರೀತಿ ಜನರಿಗೆ ನೆರವಾಗುತ್ತಲೇ ಬಂದಿದ್ದಾರೆ.
ಚಲನಚಿತ್ರ ಕ್ಷೇತ್ರವಲ್ಲದೇ ತಾವು ಹುಟ್ಟಿಬೆಳೆದ ಚಿಕ್ಕಬಳ್ಳಾಪುರ ಕೇಶಾವರ ಗ್ರಾಮದ ಸುಮಾರು ಸಾವಿರ ಮನೆಗಳಿಗೆ 25 ಕೆಜಿಯ ಅಕ್ಕಿ ಮೂಟ್ಟೆ ನೀಡಿದ್ದಾರೆ.
ನಾನು ರೈತನ ಮಗ ಕೊರೋನ ಸಂಕಷ್ಟದ ಕಾಲದಲ್ಲಿ ನನ್ನೂರಿನವರಿಗೆ ನೆರವಾಗುವುದು ನನ್ನ ಧರ್ಮ ಇಂದು ಮತ್ತು ಎಂದೆಂದಿಗೂ ನಾನು ಮಣ್ಣಿನ ಋಣ ತೀರಿಸಲು ಮುಂದಾಗಿರುತ್ತೇನೆ ಎನ್ನುತ್ತಾರೆ ಆರ್ ಚಂದ್ರು.