Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕೆ.ಜಿ.ಎಫ್ 2 ಚಿತ್ರದ ಆಡಿಯೋ ಹಕ್ಕು ಲಹರಿ ಮಡಿಲಿಗೆ
Posted date: 01 Thu, Jul 2021 06:50:31 PM
ರಾಕಿಂಗ್ ಸ್ಟರ್ ಯಶ್ ಅಭಿನಯದ, ಹೊಂಬಾಳೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಜಯ್ ಕಿರಂಗದೂರು ಅವರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದ ಕೆ.ಜಿ.ಎಫ್ 2 ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಖ್ಯಾತ ಮ್ಯೂಸಿಕ್ ಸಂಸ್ಥೆ ಲಹರಿ ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದ್ದಾರೆ.‌
ಹಲವು ಭಾಷೆಗಳಲ್ಲಿ ಕೆ.ಜಿ.ಎಫ್  2 ಚಿತ್ರ ನಿರ್ಮಾಣವಾಗಿದ್ದು, ರವಿ ಬಸ್ರೂರು ಸಂಗೀತ ನೀಡಿದ್ದಾರೆ.
ಎಲ್ಲಾ ಭಾಷೆಯ ಆಡಿಯೋ ಹಕ್ಕನ್ನು ಲಹರಿ‌ ಸಂಸ್ಥೆಯೇ ಖರೀದಿಸಿದೆ. 
ಕೆ.ಜಿ.ಎಫ್ 1 ಚಿತ್ರದ ಹಾಡುಗಳು ಸಹ ಲಹರಿ ಸಂಸ್ಥೆ ಮೂಲಕ ಹೊರಬಂದಿತ್ತು. 
ಇಂದು ಬೆಳಗ್ಗೆ ನಿರ್ಮಾಪಕ ವಿಜಯ್ ಕಿರಂಗದೂರು ಹಾಗೂ ಲಹರಿ ಸಂಸ್ಥೆ ಮಾಲೀಕರಾದ ಮನೋಹರ್ ನಾಯ್ಡು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಲಹರಿ ವೇಲು ಅವರು ತಿಳಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕೆ.ಜಿ.ಎಫ್ 2 ಚಿತ್ರದ ಆಡಿಯೋ ಹಕ್ಕು ಲಹರಿ ಮಡಿಲಿಗೆ - Chitratara.com
Copyright 2009 chitratara.com Reproduction is forbidden unless authorized. All rights reserved.