Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮೊದಲ ಹಂತದ ಚಿತ್ರೀಕರಣ ಮುಗಿಸಿದ ``ಭಗವಾನ್ ಶ್ರೀ ಕೃಷ್ಣ ಪರಮಾತ್ಮ``
Posted date: 01 Wed, Sep 2021 12:51:22 PM
ಇತ್ತೀಚೆಗಷ್ಟೇ ಶ್ರೀಕೃಷ್ಣಜನ್ಮಾಷ್ಟಮಿ ಎಲ್ಲೆಡೆ ಅದ್ದೂರಿಯಾಗಿ ನಡೆದಿದೆ. ಇದೇ ಸಮಯದಲ್ಲಿ ``ಭಗವಾನ್ ಶ್ರೀ ಕೃಷ್ಣ ಪರಮಾತ್ಮ`` ಎಂಬ ಚಿತ್ರದ ಮೊದಲ 
 ಚಿತ್ರೀಕರಣ ಸದ್ದಿಲ್ಲದೆ ಮುಗಿದಿದೆ.

 ಬೆಂಗಳೂರಿನಲ್ಲೇ ಚಿತ್ರೀಕರಣವಾಗಿದೆ.
ಶೀರ್ಷಿಕೆ ಕೇಳಿದ ತಕ್ಷಣ ಇದೊಂದು ಪೌರಾಣಿಕ ಸಿನಿಮಾ ಅಂದುಕೊಳ್ಳುವುದು‌ ಸಹಜ. ಆದರೆ ಇದೊಂದು ಪಕ್ಕಾ ಮಾಸ್ ಸಿನಿಮಾ ಎನ್ನುವ ನಿರ್ದೇಶಕರು ಈ ಶೀರ್ಷಿಕೆ ಇಟ್ಟ ಕಾರಣ ಸಿನಿಮಾ ನೋಡಿದ ಮೇಲೆ ತಿಳಿಯಲಿದೆ ಎಂದು ತಿಳಿಸಿದ್ದಾರೆ.

 ಭರತ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಭರತ್ ವಿಷ್ಣುಕಾಂತ್ ಈ ಚಿತ್ರ ನಿರ್ಮಿಸುತ್ತಿದ್ದಾರೆ.
 ಅನೂಪ್ ಆಂಟೋನಿ ಈ ಚಿತ್ರದ ನಿರ್ದೇಶಕರು. ಹಿಂದೆ ಕಥಾವಿಚಿತ್ರ ಹಾಗೂ ಮೆಹಬೂಬ ಚಿತ್ರಗಳನ್ನು ನಿರ್ದೇಶಿಸಿದ ಅನೂಪ್ ಅವರಿಗೆ ಇದು ಮೂರನೇ ಚಿತ್ರ. ಕಥೆ, ಚಿತ್ರಕಥೆ ಕೂಡ ನಿರ್ದೇಶಕರದೆ. ಸಂಭಾಷಣೆ ಬಹದ್ದೂರ್ ಚೇತನ್ ಅವರದು.

ಐದು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಅರುಣ್ ಸುರೇಶ್ ಛಾಯಾಗ್ರಹಣ ಹಾಗೂ ಮನುಗೌಡ ಅವರ ಸಂಕಲನ ಈ ಚಿತ್ರಕ್ಕಿದೆ.

 ಧ್ರುವನ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಯಶ್ ಶೆಟ್ಟಿ, ಯಶಸ್ ಸೂರ್ಯ, ಕಾಮಿಡಿ ಕಿಲಾಡಿಗಳು ಸೂರಜ್, ಶೋಭ್ ರಾಜ್, ಬಲರಾಜವಾಡಿ, ಸ್ವಾತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮೊದಲ ಹಂತದ ಚಿತ್ರೀಕರಣ ಮುಗಿಸಿದ ``ಭಗವಾನ್ ಶ್ರೀ ಕೃಷ್ಣ ಪರಮಾತ್ಮ`` - Chitratara.com
Copyright 2009 chitratara.com Reproduction is forbidden unless authorized. All rights reserved.