Chief Editor
Manohar. R (Manu)
Photo Journalist
chitrataramanu@gmail.com
+91 9845549026
ಚೇತನ್ ಕುಮಾರ್ ನಿರ್ದೇಶನದ ಮುಂದಿನ ಚಿತ್ರಕ್ಕೆ ಇಶಾನ್ ನಾಯಕ
Posted date: 21 Thu, Jul 2022 09:00:19 AM
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ``ಜೇಮ್ಸ್``. 
ಈ ಚಿತ್ರವನ್ನು ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್ (ಬಹದ್ದೂರ್) ನಿರ್ದೇಶಿಸಿದ್ದರು.

``ಜೇಮ್ಸ್`` ಸಿನಿಮಾವನ್ನು ಪುನೀತ್ ರಾಜಕುಮಾರ್  ಅವರ ಅಭಿಮಾನಿಗಳು ದೊಡ್ಡಮಟ್ಟದ ಯಶಸ್ಸು ಮಾಡಿದ್ದು ಎಲ್ಲರಿಗೂ ತಿಳಿದ ಸಂಗತಿ.

``ಜೇಮ್ಸ್`` ನಂತರ ನಿರ್ದೇಶಕ ಚೇತನ್ ಕುಮಾರ್ ಅವರ ಮುಂದಿನ ಸಿನಿಮಾ ಯಾವುದು? ಎಂಬ ಕುತೂಹಲ ಎಲ್ಲರಲ್ಲೂ ಇತ್ತು.
ಆ ಕುತೂಹಲ ಕ್ಕೆ ಈಗ ತೆರೆ ಬಿದ್ದಿದೆ. 
 
ಸದ್ಯದಲ್ಲೇ ಚೇತನ್ ಕುಮಾರ್ ನಿರ್ದೇಶನದ ಚಿತ್ರವೊಂದು ಆರಂಭವಾಗಲಿದೆ. ``ರೆಮೋ`` ಚಿತ್ರದ ಹಾಡುಗಳು, ಟೀಸರ್  ಮೂಲಕ ಈಗಾಗಲೇ ಎಲ್ಲರ ಗಮನ ಸೆಳೆದಿರುವ ಸುರದ್ರೂಪಿ ನಟ ಇಶಾನ್ ಈ ಚಿತ್ರದ ನಾಯಕನಾಗಿ ನಟಿಸಲಿದ್ದಾರೆ. 

``ರೆಮೋ`` ಚಿತ್ರದ ಬಿಡುಗಡೆ ನಂತರ ಈ ಚಿತ್ರ ಆರಂಭವಾಗಲಿದೆ. ಶೀಘ್ರದಲ್ಲೇ ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಚೇತನ್ ಕುಮಾರ್ ತಿಳಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಚೇತನ್ ಕುಮಾರ್ ನಿರ್ದೇಶನದ ಮುಂದಿನ ಚಿತ್ರಕ್ಕೆ ಇಶಾನ್ ನಾಯಕ - Chitratara.com
Copyright 2009 chitratara.com Reproduction is forbidden unless authorized. All rights reserved.