Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಕೃಷ್ಣಾವತಾರ` ಯುಗಾದಿ ಹಬ್ಬದ ವಿಶೇಷ ಗೀತೆಗೆ ಯದುವೀರ್ ಒಡೆಯರ್ ಚಾಲನೆ
Posted date: 08 Mon, Apr 2024 02:15:47 PM
ಹಿರಿಯಸಾಹಿತಿ, ನಿರ್ದೇಶಕ ಡಾ.ವಿ. ನಾಗೇಂದ್ರಪ್ರಸಾದ್ ಅವರು ಒಬ್ಬ ಪರಿಸರ ಪ್ರೇಮಿಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರ  `ಕೃಷ್ಣಾವತಾರ`  ಸಿರಿ ವೈ.ಎಸ್.ಆರ್.  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಯುಗಾದಿ ಹಬ್ಬಕ್ಕಾಗಿ ವಿಶೇಷ ಹಾಡೊಂದನ್ನು ಡಾ.ವಿ. ನಾಗೇಂದ್ರಪ್ರಸಾದ್ ಅವರು ಬರೆದಿದ್ದಾರೆ. `ಯುಗಗಳ ಆದಿ ಯುಗಾದಿ` ಎಂಬ ಯುಗಾದಿ ಮಹತ್ವ ಸಾರುವ ಸಾಹಿತ್ಯ ಒಳಗೊಂಡ ಈ ಲಿರಿಕಲ್ ವಿಡಿಯೋ ಹಾಡನ್ನು ಮೈಸೂರು ಮಹಾರಾಜರಾದ  ಯದುವೀರ್ ಒಡೆಯರ್ ಅವರು ಬಿಡುಗಡೆ ಮಾಡಿದರು. ಮುಂದಿನ ದಿನಗಳಲ್ಲಿ ಇದು ಯುಗಾದಿ ಹಬ್ಬದ ಖಾಯಂ ಹಾಡಾಗುವಂಥ ಎಲ್ಲಾ ಲಕ್ಷಣಗಳು ಈಗಾಗಲೇ ಗೋಚರಿಸಿವೆ. ಅಷ್ಟೊಂದು ಪರಿಣಾಮಕಾರಿಯಾದ ಸಾಹಿತ್ಯ, ರಾಗಸಂಯೋಜನೆ ಈ ಹಾಡಿನಲ್ಲಿದೆ. ಮ್ಯೂಸಿಕ್ ಬಜಾರ್ ಯು ಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ.
 
ಮಾಯಾಬಜಾರ್ ಫಿಲಂಸ್ ಬ್ಯಾನರ್ ಅಡಿ ಗುರುಪ್ರಸಾದ್ ಕೆ. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶುಭ ರಕ್ಷಾ, ತ್ರಿವೇಣಿ ರಾಜ್ ಚಿತ್ರದ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ವಿಶ್ವನಾಥ್, ಮಾನಸಿ ಸುಧೀರ್, ರಘು ರಾಮನಕೊಪ್ಪ, ಪ್ರಕಾಶ್ ತುಮ್ಮಿನಾಡ್ ಹಾಗೂ  ಇತರರು  ಉಳಿದ ತಾರಾಗಣದಲ್ಲಿದ್ದಾರೆ.
 
ಇನ್ನು ಈ ಚಿತ್ರಕ್ಕೆ ರಾಜ ಶಿವಶಂಕರ್ ಅವರು ಕ್ಯಾಮೆರಾ ವರ್ಕ್ ಮಾಡಿದ್ದು, ಎಬಿಎಂ ಸಂಗೀತ ಸಂಯೋಜನೆ ಮಾಡಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಕೃಷ್ಣಾವತಾರ` ಯುಗಾದಿ ಹಬ್ಬದ ವಿಶೇಷ ಗೀತೆಗೆ ಯದುವೀರ್ ಒಡೆಯರ್ ಚಾಲನೆ - Chitratara.com
Copyright 2009 chitratara.com Reproduction is forbidden unless authorized. All rights reserved.