Chief Editor
Manohar. R (Manu)
Photo Journalist
chitrataramanu@gmail.com
+91 9845549026
ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬಂದಿದೆ ``ಮತ್ತೆ ಮೊದಲಿಂದ`` ಗೀತಗುಚ್ಛ(ಆಲ್ಬಂ)
Posted date: 20 Fri, Jun 2025 12:47:45 PM
ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್, ಶ್ರೀನಿಧಿ ಹಾಗೂ ಪ್ರಸನ್ನ ಅವರು ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ ನಾಯಕನಾಗಿ ನಿಧಿ ಸುಬ್ಬಯ್ಯ, ಅಮೀತ ಎಸ್ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ನಟಿಸಿರುವ ಗೀತಗುಚ್ಛ (ಆಲ್ಬಂ) "ಮತ್ತೆ ಮೊದಲಿಂದ". ಈ ಆಲ್ಬಂ ನಲ್ಲಿ ನಾಲ್ಕು ಹಾಡುಗಳಿದೆ. ನಾಡಿನ ಜನಪ್ರಿಯ ಗಾಯಕ - ಗಾಯಕಿಯರು ಈ ಹಾಡುಗಳನ್ನು ಹಾಡಿದ್ದಾರೆ. 
 
ನಾಲ್ಕು ಬಣ್ಣಗಳ ಅಚ್ಚ ಕನ್ನಡ ಹಾಡುಗಳ  `ಮತ್ತೆ ಮೊದಲಿಂದ` ಆಲ್ಬಂನ ಮೊದಲ ಹಾಡು " ಮೋಹದ ಬಣ್ಣ ನೀಲಿ" ಇತ್ತೀಚಿನ ಸುಂದರಸಂಜೆಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಸಂಗೀತ ನೀಡಿದ್ದಾರೆ. 
 
ಶೀರ್ಷಿಕೆಯನ್ನು ಪರಿಚಯಿಸಿದ  ಯೋಗರಾಜ್‌ ಭಟ್‌ ಅವರು ಇನ್ನಷ್ಟು ವಿವರ ನೀಡುತ್ತಾ, ಈ ಆಲ್ಬಂನಲ್ಲಿ ನಾಲ್ಕು ಗೀತೆಗಳಿದ್ದು, ನಾಲ್ಕು ಸಂಗೀತ ನಿರ್ದೇಶಕರು, ನಾಲ್ಕು ಗಾಯಕರು, ನಾಲ್ಕು ನಾಯಕಿಯರು ಇರುವುದು ವಿಶೇಷ. ಜೊತೆಗೆ ನವ ಪ್ರತಿಭೆ ಸಂಜನ್‌ ಕಜೆ  ಹೆಸರಿನ ಅಪ್ಪಟ ಕನ್ನಡದ ಕರಾವಳಿ ಮೂಲದ ಯುವ ಪ್ರತಿಭಾನ್ವಿತ ನಟನನ್ನು ಪರಿಚಯಿಸುತ್ತಿದ್ದೇನೆ ಎಂದರು.
ನಾಲ್ಕೂ ಗೀತೆಗಳಿಗೆ ಭಟ್ರ ಸಾಹಿತ್ಯ ಮತ್ತು ನಿರ್ದೇಶನ ಇದ್ದು ಸಂಗೀತ ನಿರ್ದೇಶಕರಾಗಿ ಮನೋ ಮೂರ್ತಿ, ವಿ. ಹರಿಕೃಷ್ಣ, ಚೇತನ್‌-ಡ್ಯಾವಿ, ಅನಿರುದ್ಧ ಶಾಸ್ತ್ರಿ ಇದ್ದಾರೆ. ವಿಜಯ ಪ್ರಕಾಶ್‌, ಚೇತನ್‌ ಸೋಸ್ಕ, ವಾಸುಕಿ ವೈಭವ್‌, ಅದಿತಿ ಖಂಡೇಗಲ ರವರ ಗಾಯನ ಇದೆ. ನಾಲ್ಕು ಗೀತೆಗಳ ವೀಡಿಯೋದಲ್ಲಿ ಸಂಜನ್‌ ಕಜೆ ಜೊತೆ ನಿಧಿ ಸುಬ್ಬಯ್ಯ, ಅಮೀತ ಎಸ್‌. ಕುಲಾಲ್‌, ದೇವಿಕಾ ಶಿಂಧೆ, ಅಂಜಲಿ ಗೌಡ ನಾಯಕಿಯರಾಗಿ ಜೊತೆಯಾಗಿದ್ದಾರೆ. ಪ್ರಸ್ತುತ ಮೊದಲ ಹಾಡಾಗಿ "ಮೋಹದ ಬಣ್ಣ ನೀಲಿ" ಬಿಡುಗಡೆಯಾಗಿದೆ ಎಂದರು. 

ಇತ್ತೀಚಿನ ಸುಂದರ ಸಂಜೆಯಲ್ಲಿ ಖ್ಯಾತ ಲೇಖಕರು, ಇತಿಹಾಸ ತಜ್ಞರೂ ಆದ ಧರ್ಮೇಂದ್ರ ಕುಮಾರ್‌ ಆರೇನಹಳ್ಳಿ ಅವರು ಮೊದಲ ಗೀತೆಯಾದ `ನಿನ್ನ ಕಣ್ಣು ನೀಲಿ` (ಮೋಹದ ಬಣ್ಣ ನೀಲಿ) ಹಾಡನ್ನು ಪಂಚರಂಗಿ ಆಡಿಯೋ ಯೂಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆ ಮಾಡಿ ಸುಗಮ ಸಂಗೀತ, ಭಾವಗೀತೆಗಳು ವಿರಳವಾಗಿರುವ ಈ ಸಂದರ್ಭದಲ್ಲಿ ಇದೊಂದು ಶ್ಲಾಘನೀಯ ಪ್ರಯತ್ನ ಎಂದು ಯೋಗರಾಜ್‌ ಭಟ್ಟರನ್ನು ಪ್ರಶಂಶಿಸಿದರು. ತಮ್ಮ ಬಾಲ್ಯದ ದಿನಗಳಲ್ಲಿ ಮೈಸೂರು ಅನಂತಸ್ವಾಮಿಯವರ ಗೀತೆಗಳನ್ನು ಮೈಸೂರಿನಲ್ಲಿ ಕೇಳುತ್ತಿದ್ದದ್ದನ್ನು ನೆನಪು ಮಾಡಿಕೊಳ್ಳುತ್ತಾ ಭಾವಗೀತೆಗಳು ಕನ್ನಡ ನೆಲದ ಸೊಗಡು, ಇದನ್ನು ಉಳಿಸಿ ಬೆಳಸುವುದು ಸಾಹಿತಿಗಳ ಕರ್ತವ್ಯ. ಬಹಳ ವರ್ಷಗಳ ನಂತರ ಅದೇ ರೀತಿಯ ಗೀತೆಯನ್ನು ಕೇಳಿ ತುಂಬಾ ಸಂತೋಷವಾಯಿತು ಎನ್ನುತ್ತಾ ಈ ಗೀತೆಯನ್ನು ಮಾಧುರ್ಯವಾಗಿ ಹಾಡಿದ ವಿಜಯ ಪ್ರಕಾಶ್‌ ರವರನ್ನು ಪ್ರಶಂಶಿಸುತ್ತಲೇ ಅಭಿನಂದಿಸಿದರು.

ವಿಜಯ ಪ್ರಕಾಶ್‌ ರವರು ಮಾತನಾಡುತ್ತಾ ಈ ಗೀತೆಯನ್ನು ಹಾಡಲು ಚಿತ್ರಗೀತೆಗಳಿಗಿಂತ ಹೆಚ್ಚು ಮುತುವರ್ಜಿ ವಹಿಸಿದ್ದಾಗಿ ಹೇಳುತ್ತಾ ರೇಕಾರ್ಡಿಂಗ್‌ಗೆ ಬಂದರೂ ಹಾಡದೆ ಗೀತೆಯನ್ನು ಗಂಟೆಗಟ್ಟಲೆ ಕೇಳಿ ಮರುದಿನ ಬಂದು ಹಾಡಿದ್ದಾಗಿ ಹೇಳಿದರು. ಅದಕ್ಕೆ ಕಾರಣ ಈ ಗೀತೆಯಲ್ಲಿನ ವಿಶೇಷತೆ ಮತ್ತು ಸಾಹಿತ್ಯ ಸಾಲುಗಳಲ್ಲಿರುವ ಸೂಕ್ಷ್ಮತೆ. ಹಾಗು ಭಾವಗೀತೆಗಳಿಗಳ ಬಗ್ಗೆ ತಮಗಿರುವ ಅಪಾರ ಗೌರವ, ಪ್ರೀತಿ, ಭಟ್ಟರ ಜೊತೆಗಿನ ಸ್ನೇಹ ಎಲ್ಲವೂ ಸೇರಿ ಗೀತೆಯನ್ನು ಎದೆ ತುಂಬಿ ಮನಸಾರೆ ಹಾಡಿದ್ದಾಗಿ ಹೇಳಿದರು.

ಈ ಗೀತೆಯ ಸಂಗೀತ ನಿರ್ದೇಶಕ ಅನಿರುದ್ಧ ಶಾಸ್ತ್ರಿ ಮಾತನಾಡಿ ಯೋಗರಾಜ್‌ ಭಟ್ಟರ ಜೊತೆಗಿನ ಸಾಂಗತ್ಯದಲ್ಲಿ ಇದು ನನ್ನ ಚೊಚ್ಚಲ ಸಂಗೀತ ಸಂಯೋಜನೆ. ಇದು ನನಗೆ ತುಂಬಾ ಖುಷಿಕೊಟ್ಟಿದೆ. ಹಿರಿಯ ಮತ್ತು ಖ್ಯಾತ ಸಂಗೀತ ನಿರ್ದೇಶಕರುಗಳ ಸಂಗೀತ ಸಂಯೋಜನೆ ಈ ಆಲ್ಬಂನಲ್ಲಿದ್ದದ್ದು ನನಗೆ ಸವಾಲಿನ ವಿಷಯವಾಗಿತ್ತು ಅದನ್ನು ಸಮರ್ಪಕವಾಗಿ ನಿಭಾಹಿಸಲು ಅವರ ಮತ್ತು ಯೋಗರಾಜ್‌ ಸರ್‌ ರವರ ಸಹಕಾರ ಕಾರಣ ಎಂದು ಎಲ್ಲರನ್ನೂ ಸ್ಮರಿಸುತ್ತಾ ಧನ್ಯವಾದ ಹೇಳಿದರು.

ಇನ್ನು ನಾಯಕ ನಟ ಸಂಜನ್‌ ಕಜೆ ಮಾತನಾಡಿ ನಟನಾ ಕ್ಷೇತ್ರಕ್ಕೆ ನನ್ನನ್ನು ಪರಿಚಯಿಸುತ್ತಿರುವ ಯೋಗರಾಜ್‌ ಭಟ್‌ ಸರ್‌ ರವರಿಗೆ ಅನಂತಾನಂತ ಧನ್ಯವಾದಗಳನ್ನು ಹೇಳಿ ಇಷ್ಟು ದೊಡ್ಡ ವೇದಿಕೆಯನ್ನು ಸೃಷ್ಠಿಸಿಕೊಟ್ಟಿದ್ದಕ್ಕೆ ಸದಾ ಚಿರರುಣಿಯಾಗಿರುತ್ತೇನೆ ಮುಂದೆ ಸಿನಿಮಾ ಕ್ಷೇತ್ರದಲ್ಲಿ ಯೋಗರಾಜ್‌ ಭಟ್ಟರ ಮಾರ್ಗದರ್ಶನದೊಂದಿದೆ ಪ್ರಾಮಾಣಿಕವಾಗಿ ಉತ್ತಮ ನಟನಾಗಿ ಸಿನಿ ಪ್ರಿಯರ ಮುಂದೆ ಬರುತ್ತೇನೆ, ಎಲ್ಲಾ ಸಿನಿ ರಸಿಕರ ಆಶೀರ್ವಾದ ಕೋರುತ್ತೇನೆ. ಎಂದು ಹೇಳಿ ಆಲ್ಬಂನ ಎಲ್ಲಾ ಸಂಗೀತ ನಿರ್ದೇಶಕರನ್ನು, ಗಾಯಕರನ್ನು ಸ್ಮರಿಸಿ ಧನ್ಯವಾದ ಹೇಳಿದರು.

ಯೋಗರಾಜ್‌ ಭಟ್‌, ಶ್ರೀನಿಧಿ, ಪ್ರಸನ್ನ ರವರು ಮತ್ತೆ ಮೊದಲಿಂದ ಆಲ್ಬಂನ ನಿರ್ಮಾಪರಾಗಿದ್ದಾರೆ. 
ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇನ್ನುಳಿದ ಮೂರು ಗೀತೆಯನ್ನು ಪಂಚರಂಗಿ ಆಡಿಯೋ ಯೂಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆ ಮಾಡುವುದಾಗಿ ಯೋಗರಾಜ್‌ ಭಟ್‌ ಮತ್ತು ತಂಡ ಹೇಳಿಕೊಂಡರು.

ಭಟ್ಟರಿಗೆ ಸಹಾಯಕರಾಗಿ ನಿರ್ದೇಶನ ವಿಭಾಗ ಮತ್ತು ಆಲ್ಬಂ ಚಿತ್ರೀಕರಣದ ಮೇಲ್ವಿಚಾರಣೆಯನ್ನು ಸಮರ್ಪಕವಾಗಿ ನಿಭಾಹಿಸಿದ ಗಡ್ಡ ವಿಜಿ, ಅಮೋಲ್‌ ಪಾಟೀಲರನ್ನು ತುಂಬು ಹೃದಯದಿಂದ ಸ್ಮರಿಸಿದರು.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬಂದಿದೆ ``ಮತ್ತೆ ಮೊದಲಿಂದ`` ಗೀತಗುಚ್ಛ(ಆಲ್ಬಂ) - Chitratara.com
Copyright 2009 chitratara.com Reproduction is forbidden unless authorized. All rights reserved.