Chief Editor
Manohar. R (Manu)
Photo Journalist
chitrataramanu@gmail.com
+91 9845549026
``ರಾಮಾ ರಾಮಾ ರೇ``ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ದೇಶನ ಹಾಗೂ ನಟನೆಯ ಬಹು ನಿರೀಕ್ಷಿತ``X&Y``ಚಿತ್ರ ಈ ವಾರ ತೆರೆಗೆ ಬರಲಿದೆ
Posted date: 23 Mon, Jun 2025 06:05:50 PM
"ರಾಮಾ ರಾಮಾ ರೇ" ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ "X&Y" ಚಿತ್ರ ಈ ವಾರ ಜೂನ್ 26(ಗುರುವಾರ) ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. 
 
ಜನಮನ್ನಣೆ ಪಡೆದಿರುವ "ರಾಮಾ ರಾಮಾ ರೇ ", "ಒಂದಲ್ಲಾ ಎರಡಲ್ಲಾ" ಮತ್ತು "ಮ್ಯಾನ್ ಆಫ್ ದಿ ಮ್ಯಾಚ್ " ಚಿತ್ರಗಳನ್ನು ನಿರ್ದೇಶಿಸಿರುವ ಡಿ ಸತ್ಯಪ್ರಕಾಶ್ ಅವರಿಗೆ "X&Y" ನಾಲ್ಕನೇ ನಿರ್ದೇಶನದ ಚಿತ್ರ. ಈಗಾಗಲೇ ಪೋಸ್ಟರ್, ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರನ್ನು ತಲುಪಿರುವ "X&Y" ಚಿತ್ರ ಈ ವಾರ ತೆರೆಗೆ ಬರುತ್ತಿದ್ದು, ಈ ಚಿತ್ರ ಕೂಡ ಪ್ರೇಕ್ಷಕರ ಮನ ಗೆಲ್ಲಲ್ಲಿದೆ ಎಂಬ ಅಭಿಪ್ರಾಯ ಚಿತ್ರತಂಡದ್ದು. 
 
ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿದೆ. ಸತ್ಯ ಪಿಕ್ಚರ್ಸ್ ನಿರ್ಮಾಣದ "X&Y" ಚಿತ್ರದ ತಾರಾಬಳಗದಲ್ಲಿ ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ , ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ``ರಾಮಾ ರಾಮಾ ರೇ``ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ದೇಶನ ಹಾಗೂ ನಟನೆಯ ಬಹು ನಿರೀಕ್ಷಿತ``X&Y``ಚಿತ್ರ ಈ ವಾರ ತೆರೆಗೆ ಬರಲಿದೆ - Chitratara.com
Copyright 2009 chitratara.com Reproduction is forbidden unless authorized. All rights reserved.