Chief Editor
Manohar. R (Manu)
Photo Journalist
chitrataramanu@gmail.com
+91 9845549026
``ಪಿನಾಕ`` ಚಿತ್ರತಂಡದಿಂದ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ*
Posted date: 03 Thu, Jul 2025 03:37:08 PM
ಹೆಸರಾಂತ ಪೀಪಲ್‍ ಮೀಡಿಯಾ ಫ್ಯಾಕ್ಟರಿ ಸಂಸ್ಥೆಯಡಿ ಟಿ.ಜಿ. ವಿಶ್ವಪ್ರಸಾದ್‍ ಅವರು ಅಪಾರವೆಚ್ಚದಲ್ಲಿ ಹಾಗೂ ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್‍ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಪಿನಾಕ" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ‌‌. ಈ ಚಿತ್ರದ ಗಣೇಶ್ ಅವರ ಹೊಸ ಲುಕ್ ಗೆ ಈಗಾಗಲೇ ಅಭಿಮಾನಿಗಳು ಫಿದಾ ಆಗಿದ್ದಾರೆ‌. 
ನೆಲಮಂಗಲದ ಬಳಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಗಣೇಶ್ ಅವರು ಸಹ ಈ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ‌‌‌‌. 

ಜುಲೈ 2, ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಜನ್ಮದಿನ. ಈ ಸಂದರ್ಭದಲ್ಲಿ ವಿಶೇಷವಾದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ತಮ್ಮ ಚಿತ್ರದ ನಾಯಕ ಗಣೇಶ್ ಅವರಿಗೆ "ಪಿನಾಕ" ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ``ಪಿನಾಕ`` ಚಿತ್ರತಂಡದಿಂದ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ* - Chitratara.com
Copyright 2009 chitratara.com Reproduction is forbidden unless authorized. All rights reserved.