ಅಲ್ವಿನ್ ನಿರ್ದೇಶನದ, ದೀಪಾ ಮೂವೀಸ್ ಲಾಂಛನದಲ್ಲಿ ಕೆ.ಎನ್.ಕೃಷ್ಣ ಅವರು ನಿರ್ಮಿಸಿರುವ ಹಾಗೂ ಭಾರ್ಗವ ಕೃಷ್ಣ ಮತ್ತು ವಿರಾನಿಕ ಶೆಟ್ಟಿ ನಾಯಕ - ನಾಯಕಿಯಾಗಿ ನಟಿಸಿರುವ "ಓಂ ಶಿವಂ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ರೊಮ್ಯಾಂಟಿಕ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಳವಳ್ಳಿ ಸಾಯಿಕೃಷ್ಣ ಅವರದು. ವಿರೇಶ್ ಛಾಯಾಗ್ರಹಣ, ಸತೀಶ್ ಚಂದ್ರ ಸಂಕಲನ, ವಿಜಯ್ ಯಾರ್ಡ್ಲಿ ಸಂಗೀತ ನಿರ್ದೇಶನ, ನಾಗೇಶ್ ನೃತ್ಯ ನಿರ್ದೇಶನ ಹಾಗೂ ಕೌರವ ವೆಂಕಟೇಶ್, ನರಸಿಂಹ, ವೈಲೆಂಟ್ ವೇಲು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಭಾರ್ಗವ ಕೃಷ್ಣ, ವಿರಾನಿಕ ಶೆಟ್ಟಿ, ರವಿ ಕಾಳೆ, ಕಾಕ್ರೋಜ್ ಸುಧೀ, ಯಶ್ ಶೆಟ್ಟಿ, ಬಲ ರಾಜ್ವಾಡಿ, ಲಕ್ಷ್ಮೀ ಸಿದ್ದಯ್ಯ, ಅಪೂರ್ವ, ಯಗ್ರಂ ರವಿ ಮುಂತಾದವರು ತಾರಾಬಳಗದಲ್ಲಿದ್ದಾರೆ.