ಕಾಮಿಡಿ ಜತೆಗೆ ರೋಚಕ ತಿರುವುಗಳುಳ್ಳ ಸಸ್ಪೆನ್ಸ್ ಕಥೆಯೂ ಈ ಚಿತ್ರದಲ್ಲಿದೆ. ಪೊಲೀಸ್ ತನಿಖೆ, ಕೊಲೆ, ಹುಡುಕಾಟ ಇದೆಲ್ಲದರ ನಡುವೆ ಮುದ್ದಾದ ಪ್ರೇಮ ಕಹಾನಿಯೂ ಸಿನಿಮಾದಲ್ಲಿದೆ. ಕಿವಿ ಕೇಳಿಸದ, ಮಾತು ಬಾರದ ಮತ್ತು ಕಣ್ಣ ಕಾಣದ ಮೂವರು ಈ ಚಿತ್ರದಲ್ಲಿ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ತ್ವಿಷಾ ಶರ್ಮಾ ನಾಯಕಿಯಾಗಿ ನಟಿಸಿದ್ದು, ದೀಕ್ಷಿತ್ ಶೆಟ್ಟಿಗೆ ಜೋಡಿಯಾಗಿದ್ದಾರೆ. ನಟಿ ಶ್ವೇತಾ ವರ್ಮಾ ಸಹ ಪ್ರಮುಖ ಪಾತ್ರದಲ್ಲಿದ್ದಾರೆ.
ಇನ್ನುಳಿದಂತೆ ಅಪ್ಪಾರ್ಲ ಸಾಯಿ ಕಲ್ಯಾಣ್ ಕಥೆ, ಚಿತ್ರಕಥೆ ಬರೆದರೆ, ಗರುಡವೇಗ ಅಂಜಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸುರೇಶ್ ಬೊಬ್ಲಿ ಸಂಗೀತ ನೀಡಿದ್ದಾರೆ. ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿದ್ದು, ತೇಝ ಚೀಪುರುಪಲ್ಲಿ, ರವೀಂದ್ರ ರೆಡ್ಡಿ ಅಡ್ಡುಲ ಸಹ ನಿರ್ಮಾಪಕರಾಗಿದ್ದಾರೆ. ಈಗಾಗಲೇ ಚಿತ್ರತಂಡ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿದ್ದು, ಇನ್ನೇನು ಲಾಕ್ಡೌನ್ ಸಡಿಲವಾಗಿ, ಸಿನಿಮಾ ಬಿಡುಗಡೆಗೆ ಅವಕಾಶ ಸಿಗುತ್ತಿದ್ದಂತೆ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ತೆರೆಗೆ ಬರಲಿದೆ.