ಕೊರೋನ ಸಾಂಕ್ರಾಮಿಕ ವೈರಸ್ ಜಗತ್ತನ್ನು ಆವರಿಸಿ ಒಂದು ವರ್ಷಕ್ಕೂ ಜಾಸ್ತಿಯಾಗಿದೆ. ಈ ವೈರಸ್ಗೆ ಅನೇಕ ಕುಟುಂಬಗಳು ನಲುಗಿ ಹೋಗಿದೆ. ಅವುಗಳಲ್ಲಿ ನನ್ನ ಕನ್ನಡ ಸಿನೆಮಾ ಕಲಾವಿದರ ಕುಟುಂಬವು ಹೊರತಾಗಿಲ್ಲ. ಮನೆಯಲ್ಲಿದ್ದರೆ ಸುರಕ್ಷಿತವಾಗಿರುತ್ತೇವೆಂದು ನಾವೆಲ್ಲ ಭಾವಿಸಿರುತ್ತೇವೆ. ಆದರೆ ನನ್ನ ಅನೇಕ ಕಲಾವಿದ ಸ್ನೇಹಿತರು ಈ ಕೊರೋನ ಸಂದರ್ಭದಲ್ಲಿ ಜೀವನ ನಡೆಸುವುದಕ್ಕೆ ಕಷ್ಟಪಡುತ್ತಿದ್ದಾರೆ. ಹಾಗಾಗಿ ಈ ಸಮಯದಲ್ಲಿ ನನ್ನ ಸ್ನೇಹಿತರ ನೆರವಿಗೆ ನಿಲಬೇಕದದ್ದು ನನ್ನ ಕರ್ತವ್ಯ.
ಸದ್ಯ ಮುಗಿಲ್ ಪೇಟೆ ಸಿನಿಮಾದಲ್ಲಿ ನಾನು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದೇನೆ. ನನ್ನ ಈ ಒಂದು ವರ್ಷದ ಪ್ರಾಜೆಕ್ಟ್ ನಲ್ಲಿ ನೂರಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದಾರೆ. ನನ್ನ ಸಿನಿಮಾಕ್ಕಾಗಿ ತನುಮನವನ್ನು ಅರ್ಪಿಸಿದ್ದಾರೆ. ಈಗ ಅವರ ಸಂಕಷ್ಟಕಾಲದಲ್ಲಿ ಅವರ ಜೊತೆಗೆ ಅವರ ಕಷ್ಟಕ್ಕೆ ಹೆಗಲು ಕೊಡಬೇಕಾಗಿರುವುದು ನನ್ನ ಜವಾಬ್ದಾರಿ. ಹೀಗಾಗಿ ಮುಗಿಲ್ ಪೇಟೆ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರಿಗೂ ನನ್ನ ಕಡೆಯಿಂದ 5000 ಹಣವನ್ನು ಅವರ ಖಾತೆಗೆ ಹಾಕುವ ನಿರ್ಣಯ ಮಾಡಿದ್ದೇನೆ. ನನ್ನವರಿಗಾಗಿ ಈ ಸಂದರ್ಭದಲ್ಲಿ ನನ್ನ ಕೈಲಾದ ಸಹಾಯ ಮಾಡುವ ಸಣ್ಣ ಪ್ರಯತ್ನ. ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ. ಸುರಕ್ಷಿತವಾಗಿರಿ. ನಿಮ್ಮ ಕೈಲಾದಷ್ಟು ಇತರರಿಗೂ ಸಹಾಯ ಮಾಡಿ.