Chief Editor
Manohar. R (Manu)
Photo Journalist
chitrataramanu@gmail.com
+91 9845549026
ಹಂಪಿ ಪಿಕ್ಚರ್ಸ್ & R K & A K ಎಂಟರ್ಟೈನ್ಮೆಂಟ್ ನಿರ್ಮಾಣದ, ರಂಜನಿ ರಾಘವನ್ ನಿರ್ದೇಶನದ ``ಡಿಡಿ ಢಿಕ್ಕಿ`` ಚಿತ್ರತಂಡದಿಂದ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ
Posted date: 02 Wed, Jul 2025 01:56:22 PM
"ಗುರು ಶಿಷ್ಯರು", "ಲ್ಯಾಂಡ್‌ ಲಾರ್ಡ್" ಚಿತ್ರಗಳ ನಿರ್ದೇಶಕ ಹಾಗೂ "ಕಾಟೇರ" ಚಿತ್ರದ ಲೇಖಕ ಜಡೇಶ್ ಹಂಪಿ ಅವರ ಹಂಪಿ ಪಿಕ್ಚರ್ಸ್ ಹಾಗೂ ರಾಮಕೃಷ್ಣ ಹಾಗೂ ಆನಂದ್ ಕುಮಾರ್ ನೇತೃತ್ವದ R K & A k ಎಂಟರ್ಟೈನ್ಮೆಂಟ್ ಸಂಸ್ಥೆ ನಿರ್ಮಾಣದ, ಕಲಾವಿದೆಯಾಗಿ ಜನಪ್ರಿಯರಾಗಿರುವ  ರಂಜನಿ ರಾಘವನ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಹಾಗೂ "ನೆನಪಿರಲಿ" ಪ್ರೇಮ್ ನಾಯಕರಾಗಿ ನಟಿಸುತ್ತಿರುವ ಚಿತ್ರ "ಡಿಡಿ ಢಿಕ್ಕಿ". ಗೋಲ್ಡನ್ ಸ್ಟಾರ್ ಗಣೇಶ್ ಅವರ ಪುತ್ರ ಮಾಸ್ಟರ್ ವಿಹಾನ್ ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. 
 
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ "ಡಿ ಡಿ ಢಿಕ್ಕಿ" ಚಿತ್ರತಂಡ ಸಹ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶುಭಾಶಯ ತಿಳಿಸಿದೆ.
 
ಲೆಜೆಂಡ್ ಇಳಯರಾಜ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಸುಧಾಕರ್ ಅವರ ಛಾಯಾಗ್ರಹಣವಿದೆ.  ಕೆ.ಎಂ.ಪ್ರಕಾಶ್ ಸಂಕಲನವಿರುವ "ಡಿಡಿ ಢಿಕ್ಕಿ" ಚಿತ್ರಕ್ಕೆ ತರುಣ್ ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಹಂಪಿ ಪಿಕ್ಚರ್ಸ್ & R K & A K ಎಂಟರ್ಟೈನ್ಮೆಂಟ್ ನಿರ್ಮಾಣದ, ರಂಜನಿ ರಾಘವನ್ ನಿರ್ದೇಶನದ ``ಡಿಡಿ ಢಿಕ್ಕಿ`` ಚಿತ್ರತಂಡದಿಂದ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ - Chitratara.com
Copyright 2009 chitratara.com Reproduction is forbidden unless authorized. All rights reserved.