Chief Editor
Manohar. R (Manu)
Photo Journalist
chitrataramanu@gmail.com
+91 9845549026
ಇಂದಿನಿಂದ ಸಿನಿಮಾ ಬಜಾರ್ ನಲ್ಲಿ ``ಮಾಂಕ್ ದಿ ಯಂಗ್`` ಸ್ಕ್ಯಾನ್ ಮಾಡಿ ಸಿನಿಮಾ ನೋಡಿ
Posted date: 11 Sat, Oct 2025 07:10:07 PM
ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ಕಳೆದ  ಫೆಬ್ರವರಿ ಯಲ್ಲಿ ಬಿಡುಗಡೆಯಾಗಿ ಜನರ ಮೆಚ್ಚುಗೆ ಪಡೆದುಕೊಂಡಿತ್ತು. ಇಂದಿನಿಂದ (ಅಕ್ಟೋಬರ್ 10) ಈ ಚಿತ್ರವನ್ನು ಸಿನಿಮಾ ಬಜಾರ್ ಓಟಿಟಿಯಲ್ಲಿ ನೋಡಬಹುದು. ಸಿನಿಮಾ ಬಜಾರ್ ಓಟಿಟಿಯಲ್ಲಿ ಸ್ಕ್ಯಾನ್ ಮಾಡುವ ಮೂಲಕ ಈ ಚಿತ್ರವನ್ನು ವೀಕ್ಷಿಸಬಹುದು.         
 
ಈವರೆಗೂ ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.
 
ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. 
 
ನಿವೃತ್ತ ಆರ್ಮಿ ಆಫೀಸರ್ ಕರ್ನಲ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಗೋಪಿಚಂದ್,  ಲಾಲ್ ಚಂದ್ ಖತಾರ್  ಮತ್ತು ಸರೋವರ್ ಐದು ಜನ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನಿರ್ಮಾಪಕರೆಲ್ಲಾ ಈ ಚಿತ್ರದಲ್ಲಿ ನಟನೆಯನ್ನೂ ಮಾಡಿರುವುದು ವಿಶೇಷ.
 
ಕಾರ್ತಿಕ್ ಶರ್ಮ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ,  ಕ್ಲೈಮಾಕ್ಸ್ ಛಾಯಾಗ್ರಹಣ ದೀಪಕ್  ಹಾಗೂ ಧನುಷ್ ಬೆದ್ರೆ ಅವರ ಸಂಕಲನ ಹರ್ಷವರ್ಧನ್ ಏ ಎಲ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ  ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
GALLERY
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಇಂದಿನಿಂದ ಸಿನಿಮಾ ಬಜಾರ್ ನಲ್ಲಿ ``ಮಾಂಕ್ ದಿ ಯಂಗ್`` ಸ್ಕ್ಯಾನ್ ಮಾಡಿ ಸಿನಿಮಾ ನೋಡಿ - Chitratara.com
Copyright 2009 chitratara.com Reproduction is forbidden unless authorized. All rights reserved.

Fatal error: Uncaught ArgumentCountError: mysqli_close() expects exactly 1 argument, 0 given in /var/www/2abd550b-0850-492e-b3fe-6b047f2ad0c0/public_html/show-content.php:95 Stack trace: #0 /var/www/2abd550b-0850-492e-b3fe-6b047f2ad0c0/public_html/show-content.php(95): mysqli_close() #1 {main} thrown in /var/www/2abd550b-0850-492e-b3fe-6b047f2ad0c0/public_html/show-content.php on line 95