Chief Editor
Manohar. R (Manu)
Photo Journalist
chitrataramanu@gmail.com
+91 9845549026
ಆರ್ ಚಂದ್ರು ನಿರ್ದೇಶಿಸುತ್ತಿರುವ, ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ -ಒರಿಜಿನಲ್ ಮಾನ್ ಸ್ಟರ್-(OM) ಚಿತ್ರದಲ್ಲಿ ವಸಿಷ್ಠ ಸಿಂಹ
Posted date: 19 Mon, Oct 2026 08:32:19 AM
ಸದಭಿರುಚಿಯ ಚಿತ್ರಗಳ ನಿರ್ದೇಶಕ ಆರ್ ಚಂದ್ರು, "ಕಬ್ಜ"  ಚಿತ್ರದ ನಂತರ "ಒರಿಜಿನಲ್ ಮಾನ್ ಸ್ಟರ್"(OM) ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.  ಆನಂದ್ ಪಂಡಿತ್ ಅರ್ಪಿಸುವ, ಆರ್ ಸಿ ಸ್ಟುಡಿಯೋಸ್ ಲಾಂಛನದಲ್ಲಿ ಯಮುನ ಚಂದ್ರು ಅವರು ನಿರ್ಮಿಸುತ್ತಿರುವ ಹಿಂದಿ ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಚಿತ್ರ ಆರಂಭದಿಂದಲೂ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ತಮ್ಮ ಅಮೋಘ ಅಭಿನಯ ಹಾಗೂ ಕಂಚಿನ ಕಂಠದಿಂದ ಜನಪ್ರಿಯರಾಗಿರುವ ಹೆಸರಾಂತ ನಟ ವಸಿಷ್ಠ ಸಿಂಹ ಅಭಿನಯಿಸುತ್ತಿದ್ದಾರೆ. ವಸಿಷ್ಠ ಸಿಂಹ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ವಿಷಯವನ್ನು ತಿಳಿಸಿರುವ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ವಿಶೇಷ ಪೋಸ್ಟರ್ ಬಿಡಿಗಡೆ ಮಾಡಿ ವಸಿಷ್ಠ ಸಿಂಹ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. 
                                                                                                          
ಬಹು ನಿರೀಕ್ಷಿತ ಈ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಪೂರ್ಣವಾಗಿದ್ದು, ಇದೇ ತಿಂಗಳ 25 ರಿಂದ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ತೆಲುಗು ನಟ ಸುನೀಲ್ ಹಾಗೂ ವಸಿಷ್ಠ ಸಿಂಹ ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಈಗಾಗಲೇ ಶಿವಣ್ಣ ಹಾಗೂ ವಸಿಷ್ಠ ಸಿಂಹ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ "ಮಫ್ತಿ", "ಟಗರು" ಹಾಗೂ "ಕವಚ" ಚಿತ್ರಗಳು ಎಲ್ಲರ ಮನ ಗೆದ್ದಿದ್ದು, ಈಗ "OM" ಚಿತ್ರದಲ್ಲಿ ಶಿವರಾಜಕುಮಾರ್ ಅವರ ಜೊತೆಗೆ ವಸಿಷ್ಠ ಸಿಂಹ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಸಿಷ್ಠ ಸಿಂಹ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಶಿವರಾಜಕುಮಾರ್, ವಸಿಷ್ಠ ಸಿಂಹ ಹಾಗೂ ಆರ್ ಚಂದ್ರು ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ.  ಹಲವು ವಿಶೇಷಗಳಿಗೆ  ಸಾಕ್ಷಿಯಾಗಿರುವ ಹಾಗೂ "ಒರಿಜಿನಲ್ ಮಾನ್ ಸ್ಟರ್(OM) ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿರುವ ಈ ಚಿತ್ರ ಚಿತ್ರೀಕರಣ ಸಮಯದಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ.                

ಆರ್ ಚಂದ್ರು ಅವರ ನಿರ್ದೇಶನದಲ್ಲಿ ಅಭಿನಯಿಸಬೇಕೆಂದು ಬಹಳ ದಿನಗಳಿಂದ ಕಾಯುತ್ತಿದ್ದೆ. ಈಗ ಅವಕಾಶ ಸಿಕ್ಕಿದೆ. ಆರ್ ಚಂದ್ರು ಅವರ ಜೊತೆಗೆ ಕೆಲಸ ಮಾಡುತ್ತಿರುವುದು ಹಾಗೂ ಶಿವಣ್ಣ  ಅವರ ಜೊತೆಗೆ ನಟಿಸುತ್ತಿರುವುದು ಬಹಳ ಖುಷಿಯಾಗಿದೆ ಎಂದು ವಸಿಷ್ಠ ಸಿಂಹ ತಿಳಿಸಿದ್ದಾರೆ. 
                    ‌ ‌ ‌‌                             ‌                       ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ಎ ಜೆ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಪ್ರಮುಖಪಾತ್ರಗಳಲ್ಲಿ ತೆಲುಗು ನಟ ಸುನೀಲ್ ಹಾಗೂ ವಸಿಷ್ಠ ಸಿಂಹ ಅವರು ಅಭಿನಯಿಸುತ್ತಿದ್ದಾರೆ. ಇಷ್ಟೇ ಅಲ್ಲದೆ ಎಲ್ಲಾ ಭಾಷೆಗಳ ಜನಪ್ರಿಯ ಕಲಾವಿದರು "OM" ಚಿತ್ರದಲ್ಲಿ ಅಭಿನಯಿಸಿಲಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು  ಮುಂದಿನ ದಿನಗಳಲ್ಲಿ ನೀಡುವುದಾಗಿ ನಿರ್ದೇಶಕ ಆರ್ ಚಂದ್ರು ತಿಳಿಸಿದ್ದಾರೆ.
GALLERY
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಆರ್ ಚಂದ್ರು ನಿರ್ದೇಶಿಸುತ್ತಿರುವ, ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ -ಒರಿಜಿನಲ್ ಮಾನ್ ಸ್ಟರ್-(OM) ಚಿತ್ರದಲ್ಲಿ ವಸಿಷ್ಠ ಸಿಂಹ - Chitratara.com
Copyright 2009 chitratara.com Reproduction is forbidden unless authorized. All rights reserved.

Fatal error: Uncaught ArgumentCountError: mysqli_close() expects exactly 1 argument, 0 given in /var/www/2abd550b-0850-492e-b3fe-6b047f2ad0c0/public_html/show-content.php:95 Stack trace: #0 /var/www/2abd550b-0850-492e-b3fe-6b047f2ad0c0/public_html/show-content.php(95): mysqli_close() #1 {main} thrown in /var/www/2abd550b-0850-492e-b3fe-6b047f2ad0c0/public_html/show-content.php on line 95