Chief Editor
Manohar. R (Manu)
Photo Journalist
chitrataramanu@gmail.com
+91 9845549026
`ತರಂಗಾಂತರಂಗ` ಚಿತ್ರದ ಹಾಡು ಬಿಡುಗಡೆ ಹೊಸಬರ ಪುನರ್ಜನ್ಮದ ಕಥೆ ಹೇಳುತ್ತಿದೆ `ತರಂಗಾಂತರಂಗ` ಚಿತ್ರ!
Posted date: 04 Wed, Nov 2026 05:05:31 PM
ಕರ್ನಾಟಕದ ಕಡಲ ತೀರದ ಅನೇಕ ಪ್ರತಿಭೆಗಳು ಪ್ರತಿ ವರ್ಷ ಕನ್ನಡ ಚಿತ್ರರಂಗಕ್ಕೆ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ, ತಂತ್ರಜ್ಞರಾಗಿ ಪರಿಚಯವಾಗುತ್ತಲೇ ಇರುತ್ತಾರೆ. ಈಗ ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಹೆಸರು ಶ್ರೀಷ ಅವರದ್ದು. 
 
ಹೌದು, ಉಡುಪಿಯ ಬೈಂದೂರು ಮೂಲದ ಯುವ ಪ್ರತಿಭೆ ಶ್ರೀಷ ಇದೀಗ `ತರಂಗಾಂತರಂಗ` ಚಿತ್ರದ ಮೂಲಕ ನಾಯಕ ನಟನಾಗಿ ಮತ್ತು ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಗ್ರಾಫಿಕ್ಸ್ ಡಿಸೈನರ್ ಆಗಿ ಮತ್ತು ಇವೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡಿದ ಅನುಭವ ಇರುವ ಶ್ರೀಷ, `ತರಂಗಾಂತರಂಗ` ಎಂಬ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿ ಜೊತೆಗೆ ಈ ಚಿತ್ರಕ್ಕೆ ನಿರ್ದೇಶನವನ್ನೂ ಮಾಡಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣವಾಗಿದ್ದು, ಕೆಲ ದಿನಗಳ ಹಿಂದಷ್ಟೇ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಇದೀಗ ಈ ಚಿತ್ರದ ಆಡಿಯೋ ಕೂಡ ಬಿಡುಗಡೆ ಆಗಿದೆ.
 
ಚಿತ್ರದ ಆಡಿಯೋ ಬಿಡುಗಡೆ  ವೇಳೆ ಮಾತನಾಡಿದ ಚಿತ್ರದ ನಾಯಕ ನಟ ಮತ್ತು ನಿರ್ದೇಶಕ ಶ್ರೀಷ, ಇದೊಂದು ಪುನರ್ಜನ್ಮದ ಕಥೆ ಹೊಂದಿರುವ ಚಿತ್ರ. ನಾವು ದೇವರಿಗೆ ಕಟ್ಟಿಕೊಂಡ ಹರಕೆ ಅಥವಾ ಸೇವೆಗಳನ್ನು ತೀರಿಸಲು ವಿಫಲವಾದರೆ, ಅದರಿಂದ ಏನು ಆಗಬಹುದು ಎಂಬ ಕಥೆಯ ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಹಿಸ್ಟರಿ, ಸಸ್ಪೆನ್ಸ್, ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾವನ್ನು ನಿರ್ದೇಶನ ಮಾಡಿ, ತೆರೆ ಮೇಲೆ ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನೋಡುಗರಿಗೆ ಈ ಸಿನಿಮಾ ಹೊಸ ಅನುಭವ ಕೊಡಲಿದೆ  ಎಂದು ಭರವಸೆಯ ಮಾತುಗಳನ್ನಾಡಿದರು. 
 
`ತರಂಗಾಂತರಂಗ` ಚಿತ್ರದಲ್ಲಿ ನಟ ಪ್ರಮೋದ್ ಶೆಟ್ಟಿ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನಾಯಕ ನಟ ಶ್ರೀಷ ಅವರಿಗೆ ಚೆರಿಕಾ ಮೂರ್ತಿ ಮತ್ತು ಯಶಸ್ವಿನಿ ಸ್ವಾಮಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಉಳಿದಂತೆ ಹಿರಿಯ ನಟರಾದ ರಮೇಶ್ ಪಂಡಿತ್, ಪ್ರಭಾಕರ ಕುಂದರ್, ಲಿಖಿತಾ ಶೆಟ್ಟಿ, ಮುರಳಿ ಮತ್ತಿತರರು ಇತರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
 
ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಪ್ರಮುಖ ಕಲಾವಿದರು, ಯುವ ನಟ, ನಿರ್ದೇಶಕ ಶ್ರೀಷ ಮತ್ತು ಅವರ ತಂಡ ಸೇರಿಕೊಂಡು ಒಂದು ಒಳ್ಳೆಯ ಸಿನಿಮಾ ಮಾಡಿದ್ದಾರೆ. ನಾನು ಈ ಚಿತ್ರತಂಡದ ಭಾಗವಾಗಿರುವುದಕ್ಕೆ ಖುಷಿಯಿದೆ. ಚಿತ್ರತಂಡದ ಜೊತೆ ಕೆಲಸ ಮಾಡಿದ್ದು ಒಂದು ಒಳ್ಳೆಯ ಅನುಭವ ಎಂದರು.
 
ಈ ಸಂದರ್ಭದಲ್ಲಿ ಚಿತ್ರದ ಕಲಾವಿದರು ಹಾಗೂ ತಂತ್ರಜ್ಞರು ಹಾಜರಿದ್ದು, ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಹಂಚಿಕೊಂಡರು. 
 
ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿ ಮರೆಯಾದ ನಟರಾದ ದಿವಂಗತ ದಿನೇಶ್ ಮಂಗಳೂರು ಮತ್ತು ದಿವಂಗತ ರಾಕೇಶ್ ಪೂಜಾರಿ ಕೂಡ ಕೊನೆಯದಾಗಿ ಈ ಚಿತ್ರಕ್ಕೆ ಬಣ್ಣ ಹಚ್ಚಿದ್ದು ವಿಶೇಷ. 
 
ಸದ್ಯ ಆಡಿಯೋ ಬಿಡುಗಡೆ ಮಾಡಿ,  ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಶೀಘ್ರದಲ್ಲೇ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆ ಹಾಕಿಕೊಂಡಿದೆ.
GALLERY
Kannada Cinema's Latest Wallpapers
Kannada Cinema's Latest Videos
Kannada Movie/Cinema News - `ತರಂಗಾಂತರಂಗ` ಚಿತ್ರದ ಹಾಡು ಬಿಡುಗಡೆ ಹೊಸಬರ ಪುನರ್ಜನ್ಮದ ಕಥೆ ಹೇಳುತ್ತಿದೆ `ತರಂಗಾಂತರಂಗ` ಚಿತ್ರ! - Chitratara.com
Copyright 2009 chitratara.com Reproduction is forbidden unless authorized. All rights reserved.

Fatal error: Uncaught ArgumentCountError: mysqli_close() expects exactly 1 argument, 0 given in /var/www/2abd550b-0850-492e-b3fe-6b047f2ad0c0/public_html/show-content.php:95 Stack trace: #0 /var/www/2abd550b-0850-492e-b3fe-6b047f2ad0c0/public_html/show-content.php(95): mysqli_close() #1 {main} thrown in /var/www/2abd550b-0850-492e-b3fe-6b047f2ad0c0/public_html/show-content.php on line 95